BREAKING NEWS

ಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ: ಜರ್ಮನಿ ವೈದ್ಯರ ಮನವಿ

ನವದೆಹಲಿ: ಕಾನೂನು ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಯುವಕನೋರ್ವ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಘಟನೆ ನಂತರ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಪ್ರೊ.ಎನ್ ಜಾನ್ ಕ್ಯಾಮ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ,  ಈ ಸಲಹೆ ಯೋಗಿ ಆದಿತ್ಯನಾಥ್ ಮಾದರಿಗೆ ಜಗತ್ತಿನಾದ್ಯಂತ ಲಭಿಸಿರುವ ಜನಪ್ರಿಯತೆ ಎಂದು ಬಣ್ಣಿಸಿದೆ.

ಜರ್ಮನಿಯ ಹೃದ್ರೋಗ ತಜ್ಞ ಎಂದು ಹೇಳಿಕೊಂಡಿರುವ ಪ್ರೊ. ಎನ್ ಜಾನ್ ಕ್ಯಾಮ್,  ಫ್ರಾನ್ಸ್ ನಲ್ಲಿರುವ ಸ್ಥಿತಿಯನ್ನು ನಿಯಂತ್ರಿಸುವುದಕ್ಕಾಗಿ ಭಾರತ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಬೇಕು, ಅವರು 24 ಗಂಟೆಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಾರೆ ಎಂದು ಯೋಗಿ ಆದಿತ್ಯನಾಥ್ ಅವರನ್ನು ಟ್ಯಾಗ್ ಮಾಡಿ ಹೇಳಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ,  ಉಗ್ರವಾದವು ಗಲಭೆಗಳಿಗೆ ಉತ್ತೇಜನ ನೀಡಿದಾಗ, ಅವ್ಯವಸ್ಥೆ ಆವರಿಸಿದಾಗ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಸಮಸ್ಯೆ ಜಗತ್ತಿನ ಯಾವುದೇ ಭಾಗದಲ್ಲಿ ಉಂಟಾದಾಗ, ಜಗತ್ತು ಸಾಂತ್ವನಕ್ಕೆ ಹಾಗೂ ಮಹಾರಾಜ್ ಜಿ (ಆದಿತ್ಯನಾಥ್) ಸ್ಥಾಪಿಸಿದ ಯೋಗಿ ಮಾದರಿಯ ಕಾನೂನು ಸುವ್ಯವಸ್ಥೆಯನ್ನು ಬಯಸುತ್ತದೆ ಎಂದು ಹೇಳಿದೆ.

ಬಿಜೆಪಿ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ಮೌನವಾಗಿಸುವುದರಲ್ಲಿ ಸಮರ್ಥರಾಗಿದ್ದಾರೆ. ”ಆದಿತ್ಯನಾಥ್ ಅವರ ವಿಶೇಷತೆಯೆಂದರೆ ಅವರು ಅಪರಾಧಿಗಳೊಂದಿಗೆ ಕಠಿಣವಾಗಿ ವ್ಯವಹರಿಸುತ್ತಾರೆ… ಅವರ ಮನೆಗಳನ್ನು ಧ್ವಂಸಗೊಳಿಸಲು ಅವರು ಬುಲ್ಡೋಜರ್‌ಗಳನ್ನು ಬಳಸುತ್ತಾರೆ,” ಎಂದು ಹೇಳಿದ್ದಾರೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

9 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

9 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

10 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 hours ago