ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.
“ಭಾರತದ ಜನರ ಪರವಾಗಿ ಈ ಏಕಮಾನ ಗೌರವಕ್ಕಾಗಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು” ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.ಇದಕ್ಕೂ ಮುನ್ನ ಫ್ರೆಂಚ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರು ಎಲಿಸೀ ಅರಮನೆಯಲ್ಲಿ ಮೋದಿ ಅವರಿಗೆ ಖಾಸಗಿ ಔತಣಕೂಟವನ್ನು ಏರ್ಪಡಿಸಿದ್ದರು.
ಭಾರತೀಯ ವಲಸಿಗರೊಂದಿಗೆ ಪ್ರಧಾನಿ ಸಂವಾದ: ನಿನ್ನೆ ಸಂಜೆ ಪ್ಯಾರಿಸ್ ಗೆ ಬಂದಿಳಿದ ಪ್ರಧಾನಿ ಮೋದಿ ಇಲ್ಲಿನ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು.
ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಉತ್ಸಾಹಭರಿತ ಪ್ರೇಕ್ಷಕರನ್ನು ಉದ್ದೇಶಿಸಿ ಸುಮಾರು ಒಂದು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ — ಸೀನ್ ನದಿಯ ದ್ವೀಪದಲ್ಲಿ ಪ್ರದರ್ಶನ ಕಲೆಯ ಕೇಂದ್ರ – ಭಾರತದ ವೇಗದ ಬೆಳವಣಿಗೆಯನ್ನು ವಿವರಿಸಿದರು. ಜಗತ್ತು ಹೊಸದತ್ತ ಸಾಗುತ್ತಿದೆ ಎಂದು ಪ್ರತಿಪಾದಿಸಿದರು. ಸುವ್ಯವಸ್ಥೆ, ಭಾರತದ ಶಕ್ತಿ ಮತ್ತು ಪಾತ್ರವೂ ಬಹಳ ಬೇಗನೆ ಬದಲಾಗುತ್ತಿದೆ ಎಂದರು.
ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದಾಗಿ ಮೋದಿ ಘೋಷಿಸಿದರು. ಫ್ರಾನ್ಸ್ ನಲ್ಲಿ ಸ್ನಾತಕೋತ್ತರ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ಭಾರತೀಯ ಸಮೂಹವನ್ನುದ್ದೇಶಿಸಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…