BREAKING NEWS

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವ

ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.

ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.

“ಭಾರತದ ಜನರ ಪರವಾಗಿ ಈ ಏಕಮಾನ ಗೌರವಕ್ಕಾಗಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು” ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.ಇದಕ್ಕೂ ಮುನ್ನ ಫ್ರೆಂಚ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರು ಎಲಿಸೀ ಅರಮನೆಯಲ್ಲಿ ಮೋದಿ ಅವರಿಗೆ ಖಾಸಗಿ ಔತಣಕೂಟವನ್ನು ಏರ್ಪಡಿಸಿದ್ದರು.

ಭಾರತೀಯ ವಲಸಿಗರೊಂದಿಗೆ ಪ್ರಧಾನಿ ಸಂವಾದ: ನಿನ್ನೆ ಸಂಜೆ ಪ್ಯಾರಿಸ್ ಗೆ ಬಂದಿಳಿದ ಪ್ರಧಾನಿ ಮೋದಿ ಇಲ್ಲಿನ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು.

ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಉತ್ಸಾಹಭರಿತ ಪ್ರೇಕ್ಷಕರನ್ನು ಉದ್ದೇಶಿಸಿ ಸುಮಾರು ಒಂದು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ — ಸೀನ್ ನದಿಯ ದ್ವೀಪದಲ್ಲಿ ಪ್ರದರ್ಶನ ಕಲೆಯ ಕೇಂದ್ರ – ಭಾರತದ ವೇಗದ ಬೆಳವಣಿಗೆಯನ್ನು ವಿವರಿಸಿದರು. ಜಗತ್ತು ಹೊಸದತ್ತ ಸಾಗುತ್ತಿದೆ ಎಂದು ಪ್ರತಿಪಾದಿಸಿದರು. ಸುವ್ಯವಸ್ಥೆ, ಭಾರತದ ಶಕ್ತಿ ಮತ್ತು ಪಾತ್ರವೂ ಬಹಳ ಬೇಗನೆ ಬದಲಾಗುತ್ತಿದೆ ಎಂದರು.

ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದಾಗಿ ಮೋದಿ ಘೋಷಿಸಿದರು. ಫ್ರಾನ್ಸ್ ನಲ್ಲಿ ಸ್ನಾತಕೋತ್ತರ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ಭಾರತೀಯ ಸಮೂಹವನ್ನುದ್ದೇಶಿಸಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago