ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.
ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ ಅದನ್ನು ಮನ್ನಾ ಮಾಡಲಾಗುವುದು ಎಂದರು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ,ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…