BREAKING NEWS

ಸಣ್ಣ ನೇಕಾರರಿಗೆ 10 ಎಚ್.ಪಿ ವರೆಗೆ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ  ಉಚಿತ ವಿದ್ಯುತ್ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ  ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ  ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ  ಅದನ್ನು ಮನ್ನಾ ಮಾಡಲಾಗುವುದು ಎಂದರು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ  ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ,ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ  ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್  ಉಪಸ್ಥಿತರಿದ್ದರು.

andolanait

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

47 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

3 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago