BREAKING NEWS

70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಡಿ ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು.

ಗುರುವಾರ (ಜೂನ್‌.27) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು ಈ ಯೋಜನೆಯ ಫಲಾನುಭವಿಗಳಿಗೆ ಉಚಿತ ಸೇವೆ ಸಿಗಲಿದೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ್‌-ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ದೇಶದಲ್ಲಿ 25 ಸಾವಿರ ಜನೌಷಧ ಕೇಂದ್ರಗಳನ್ನು ತರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಮುರ್ಮು ಅವರು ಹೇಳಿದರು.

ಎಬಿ-ಎನ್‌ಎಚ್‌ಪಿಎಂ 50 ಕೋಟಿ ಜನರಿಗೆ ಉಪಯೋಗ ಆಗಲಿದ್ದು, ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿರುವುದು ವಿಶೇಷವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

9 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

14 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

15 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

15 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

18 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

22 hours ago