ಆಗಸ್ಟ್‌ 23ರಿಂದ 9ರಿಂದ ದ್ವಿತೀಯ ಪಿಯುವರೆಗೆ ತರಗತಿ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಆಗಸ್ಟ್‌ 23ರಿಂದ ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

× Chat with us