ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.
ʼʼಕುಮಾರಸ್ವಾಮಿ ಅವರ ರಾಜಕೀಯ ಬೆಳವಣಿಗೆಯನ್ನ ಮೊದಲಿನಿಂದ ರಾಷ್ಟ್ರೀಯ ನಾಯಕರು ಗುರುತಿಸಿದ್ದಾರೆ. ಅವರ ನಾಯಕತ್ವಕ್ಕೆ ರಾಷ್ಟ್ರದಲ್ಲಿ ಒಂದು ಮಾನ್ಯತೆ ಸಿಕ್ಕಿದೆ. ನಾವೆಲ್ಲಾ ಒಟ್ಟು ಸೇರಿ ಒಂದು ತೀರ್ಮಾನ ಮಾಡಿದ್ದೇವೆ. ಪಕ್ಷದ ಅಧ್ಯಕ್ಷ ಸ್ಥಾನ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆʼʼ ಎಂದು ಅವರು ಹೇಳಿದರು.
ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ಕುಮಾರಸ್ವಾಮಿ ನೇಮಕ
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…