ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಮತ್ತೆ ಉಗ್ರರ ದಾಳಿ ನಡೆದಿದೆ. ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. ಉತ್ತರ ಪ್ರದೇಶದಿಂದ ತೆರಳಿದ್ದ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಸೋಮವಾರ ರಾತ್ರಿ ನಡೆಸಿದ ದಾಳಿಯಲ್ಲಿ ಕೊಂದು ಹಾಕಿದ್ದಾರೆ.
ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತನನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿ ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಶೋಪಿಯಾನ್‌ನ ಹರ್ಮೆನ್ ಪ್ರದೇಶದಲ್ಲಿ ಸೋಮವಾರ ತಡ ರಾತ್ರಿ, ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕನೊಬ್ಬ ಗ್ರೆನೇಡ್ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಕಾರ್ಮಿಕರನ್ನು ರಾಮ್ ಸಾಗರ್ ಮತ್ತು ಮೊನೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತರ ಪ್ರದೇಶದ ಕನ್ನೌಜ್ ನಿವಾಸಿಗಳಾಗಿದ್ದಾರೆ. ಗ್ರೆನೇಡ್ ಎಸೆದು ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಉಗ್ರನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ





