ಉತ್ತರ ಪ್ರದೇಶ/ಅಲಹಾಬಾದ್: ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ತಮ್ಮ ಆಯ್ಕೆಯ ಹೆಸರನ್ನು ಇಟ್ಟುಕೊಳ್ಳಲು ಸಮೀರ್ ರಾವ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್ ಭಾನೋಟ್ ಅವರು ಈ ತೀರ್ಪು ನೀಡಿದ್ದಾರೆ.
ಹೆಸರು ಬದಲಾವಣೆಗೆ ಒಪ್ಪದೇ ಡಿಸೆಂಬರ್ 24, 2020 ರಂದು ಉತ್ತರಪ್ರದೇಶದ ಬರೇಲಿಯ ಮಾಧ್ಯಮಿಕ ಶಿಕ್ಷಾ ಪರಿಷತ್ ನ ಪ್ರಾದೇಶಿಕ ಕಾರ್ಯದರ್ಶಿ ಅವರು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದಾರೆ. ಪರಿಷತ್, ವ್ಯಕ್ತಿಯ ಹೆಸರು ಬದಲಾವಣೆಯ ಅರ್ಜಿಯನ್ನು ತಿರಸ್ಕರಿಸಿತ್ತು.
ಅರ್ಜಿದಾರರ ಹೆಸರನ್ನು ಶಹನವಾಜ್ ಎಂಬ ಹೆಸರಿನ ಬದಲು ಎಂಡಿ ಸಮೀರ್ ರಾವ್ ಎಂದು ಬದಲಾಯಿಸಲು ಮತ್ತು ಹೊಸದಾಗಿ 10 ನೇ ತರಗತಿ ಮತ್ತು 12 ನೇ ತರಗತಿ ಪ್ರಮಾಣಪತ್ರಗಳನ್ನು ಈ ಬದಲಾವಣೆಯ ಹೆಸರಿನೊಂದಿಗೆ ನೀಡಲು ಅರ್ಜಿದಾರರ ಅರ್ಜಿಯನ್ನು ಅನುಮತಿಸುವಂತೆ ಹೈಕೋರ್ಟ್ ಪ್ರತಿವಾದಿಗಳಿಗೆ ನಿರ್ದೇಶಿಸಿದೆ.
ಉತ್ತರಪ್ರದೇಶ ಪ್ರೌಢಶಾಲೆ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಹೈಸ್ಕೂಲ್ ಮತ್ತು ಇಂಟರ್ಮೀಡಿಯೇಟ್ ಪರೀಕ್ಷೆಯ ಪ್ರಮಾಣಪತ್ರಗಳಲ್ಲಿ ಹೆಸರನ್ನು ಬದಲಾಯಿಸಲು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಈ ಕ್ರಮವನ್ನ ಪ್ರಶ್ನಿಸಿದ್ದರು.
ಮೇ 25 ರಂದು ತನ್ನ ತೀರ್ಪಿನಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಆಯ್ಕೆಯ ಹೆಸರನ್ನು ಇಡುವ ಅಥವಾ ವೈಯಕ್ತಿಕ ಆದ್ಯತೆಗೆ ಅನುಗುಣವಾಗಿ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದ ಆರ್ಟಿಕಲ್ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಆರ್ಟಿಕಲ್ 21 (ಜೀವನದ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಮತ್ತು ಆರ್ಟಿಕಲ್ 14 (ಸಮಾನತೆಯ ಹಕ್ಕು) ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತೀರ್ಪು ನೀಡಿದೆ.
ಅರ್ಜಿದಾರರ ಮನವಿ ತಿರಸ್ಕಾರ ಮಾಡಿರುವುದು ಈ ಆರ್ಟಿಕಲ್ ನಡಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ನ್ಯಾಯಾಲಯ ಹೇಳಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…