BREAKING NEWS

ಹೆಸರು ಬದಲಾಯಿಸಿಕೊಳ್ಳುವುದು ವ್ಯಕ್ತಿಯ ಮೂಲಭೂತ ಹಕ್ಕು: ಹೈಕೋರ್ಟ್ ಮಹತ್ವದ ತೀರ್ಪು

ಉತ್ತರ ಪ್ರದೇಶ/ಅಲಹಾಬಾದ್‌: ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ತಮ್ಮ ಆಯ್ಕೆಯ ಹೆಸರನ್ನು ಇಟ್ಟುಕೊಳ್ಳಲು ಸಮೀರ್ ರಾವ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್ ಭಾನೋಟ್ ಅವರು ಈ ತೀರ್ಪು ನೀಡಿದ್ದಾರೆ.

ಹೆಸರು ಬದಲಾವಣೆಗೆ ಒಪ್ಪದೇ ಡಿಸೆಂಬರ್ 24, 2020 ರಂದು ಉತ್ತರಪ್ರದೇಶದ ಬರೇಲಿಯ ಮಾಧ್ಯಮಿಕ ಶಿಕ್ಷಾ ಪರಿಷತ್ ನ ಪ್ರಾದೇಶಿಕ ಕಾರ್ಯದರ್ಶಿ ಅವರು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದಾರೆ. ಪರಿಷತ್, ವ್ಯಕ್ತಿಯ ಹೆಸರು ಬದಲಾವಣೆಯ ಅರ್ಜಿಯನ್ನು ತಿರಸ್ಕರಿಸಿತ್ತು.

ಅರ್ಜಿದಾರರ ಹೆಸರನ್ನು ಶಹನವಾಜ್ ಎಂಬ ಹೆಸರಿನ ಬದಲು ಎಂಡಿ ಸಮೀರ್ ರಾವ್ ಎಂದು ಬದಲಾಯಿಸಲು ಮತ್ತು ಹೊಸದಾಗಿ 10 ನೇ ತರಗತಿ ಮತ್ತು 12 ನೇ ತರಗತಿ ಪ್ರಮಾಣಪತ್ರಗಳನ್ನು ಈ ಬದಲಾವಣೆಯ ಹೆಸರಿನೊಂದಿಗೆ ನೀಡಲು ಅರ್ಜಿದಾರರ ಅರ್ಜಿಯನ್ನು ಅನುಮತಿಸುವಂತೆ ಹೈಕೋರ್ಟ್ ಪ್ರತಿವಾದಿಗಳಿಗೆ ನಿರ್ದೇಶಿಸಿದೆ.

ಉತ್ತರಪ್ರದೇಶ ಪ್ರೌಢಶಾಲೆ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಹೈಸ್ಕೂಲ್ ಮತ್ತು ಇಂಟರ್ಮೀಡಿಯೇಟ್ ಪರೀಕ್ಷೆಯ ಪ್ರಮಾಣಪತ್ರಗಳಲ್ಲಿ ಹೆಸರನ್ನು ಬದಲಾಯಿಸಲು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಈ ಕ್ರಮವನ್ನ ಪ್ರಶ್ನಿಸಿದ್ದರು.

ಮೇ 25 ರಂದು ತನ್ನ ತೀರ್ಪಿನಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಆಯ್ಕೆಯ ಹೆಸರನ್ನು ಇಡುವ ಅಥವಾ ವೈಯಕ್ತಿಕ ಆದ್ಯತೆಗೆ ಅನುಗುಣವಾಗಿ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದ ಆರ್ಟಿಕಲ್ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಆರ್ಟಿಕಲ್ 21 (ಜೀವನದ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಮತ್ತು ಆರ್ಟಿಕಲ್ 14 (ಸಮಾನತೆಯ ಹಕ್ಕು) ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತೀರ್ಪು ನೀಡಿದೆ.

ಅರ್ಜಿದಾರರ ಮನವಿ ತಿರಸ್ಕಾರ ಮಾಡಿರುವುದು ಈ ಆರ್ಟಿಕಲ್ ನಡಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ನ್ಯಾಯಾಲಯ ಹೇಳಿದೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago