ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.
‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.
‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…