ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ʼʼಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆʼʼ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು…
— CM of Karnataka (@CMofKarnataka) August 21, 2023
ʼʼಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆʼʼ ಎಂದು ಟ್ವೀಟ್ ಮಾಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸ್ ಬಂದೋ ಬಸ್ತ್
ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿ, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.





