BREAKING NEWS

ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ: ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆʼʼ ಎಂದು ಎಚ್ಚರಿಕೆ ನೀಡಿದ್ದಾರೆ.

ʼʼಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆʼʼ ಎಂದು ಟ್ವೀಟ್‌ ಮಾಡಿದ್ದಾರೆ.

ಘಟನಾ ಸ್ಥಳದಲ್ಲಿ ಪೊಲೀಸ್‌ ಬಂದೋ ಬಸ್ತ್

ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿ, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

1 hour ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

2 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

2 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

3 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

3 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

7 hours ago