ಮಂಡ್ಯ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆತಂದು ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಮೋಬೈಲ್ ನಲ್ಲಿ ಅತ್ಯಾಚಾರದ ವಿಡಿಯೋವನ್ನೂ ಸಹ ಚಿತ್ರೀಕರಿಸಿದ್ದಾರೆ.
ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಪರಿಚಯಸ್ಥರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ಥೆಯ ಪೋಷಕರು ಮದ್ದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.