Mysore
18
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ : 27 ಜನರ ಉಚ್ಚಾಟನೆ

ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ ಅವರ 27 ಜನ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಧಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!