BREAKING NEWS

ಚಿರತೆಗೆ ಬಾಲಕಿ ಬಲಿ : ತಿರುಮಲ ಬೆಟ್ಟ ಹತ್ತಲು ಹೊಸ ರೂಲ್ಸ್‌

ತಿರುಪತಿ : ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ.

ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2ರವರೆಗೆ ಮಾತ್ರ 15ವರ್ಷದ ಮಕ್ಕಳ ಜೊತೆ ಪೋಷಕರು ಬೆಟ್ಟ ಹತ್ತಬಹುದಾಗಿದೆ. ಅಲಿಪಿರಿ ಮಾರ್ಗಮಧ್ಯೆ ಏಳನೇ ಮೈಲಿ ಬಳಿ ಮಕ್ಕಳಿಗೆ ಟ್ಯಾಗ್ ಹಾಕಲಾಗುತ್ತದೆ. ಅದರಲ್ಲಿ ಮಕ್ಕಳ ಹೆಸರು, ಪೋಷಕರ ವಿವರ, ಫೋನ್ ನಂಬರ್, ಪೊಲೀಸ್ ಟೋಲ್ ಫ್ರೀ ನಂಬರ್ ಇರಲಿದೆ.

ಹಿರಿಯರು ರಾತ್ರಿ 10 ಗಂಟೆಯವರೆಗೆ ಹೋಗಬಹುದು. ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯವರೆಗೆ ಮಾತ್ರ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡಲಾಗುತ್ತದೆ. ಯಾತ್ರಾರ್ಥಿಗಳನ್ನು ಗುಂಪುಗಳಲ್ಲಿ ಕಳುಹಿಸಲು ನಿರ್ಧರಿಸಲಾಗಿದೆ.

ಚಿರತೆ ಮಗುವನ್ನು ಕೊಂದು ಹಾಕಿರುವ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳು, ಪೊಲೀಸ್‌ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಟಿಟಿಡಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ, ತಿರುಪತಿ ಮತ್ತು ತಿರುಮಲ ನಡುವೆ 500 ಕ್ಯಾಮೆರಾ ಸ್ಥಾಪಿಸಲಾಗುವುದು ಮತ್ತು ಅಗತ್ಯವಿದ್ದರೆ ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗುವುದು ಎಂದು ತಿಳಿಸಿದರು.

ನರಭಕ್ಷಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದರೂ ತಿರುಮಲದಲ್ಲಿ ಇನ್ನೂ ಐದು ಚಿರತೆಗಳು ಇವೆ ಎನ್ನಲಾಗಿದೆ. ಈ ಆತಂಕದ ಮಧ್ಯೆ 2000 ಮೆಟ್ಟಿಲ ಬಳಿ ಕರಡಿ ಕೂಡ ಕಾಣಿಸಿಕೊಂಡಿದೆ.

lokesh

Recent Posts

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

2 mins ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

24 mins ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

4 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

4 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

4 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

4 hours ago