BREAKING NEWS

ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಹರಿಸಿ : ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಆದೇಶ

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.

ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.

ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.

ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್‌ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.

ಸೆ.21ರ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಪ್ರತಿನಿತ್ಯ ಮುಂದಿನ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಆದೇಶಿಸಿತ್ತು.

lokesh

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

1 hour ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

1 hour ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

1 hour ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

1 hour ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

13 hours ago