ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ ಇದ್ದಾರೆ. ಕಬ್ಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30,000 ಪರಿಹಾರ ಕೊಡಿ. ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಿ.ಕೇಂದ್ರ ಸರ್ಕಾರ ಕೊಡಬೇಕಾದ ಬರ ಪರಿಹಾರ ಕೊಟ್ಟೆ ಕೊಡುತ್ತದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿವೈ ವಿಜೇಂದ್ರ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ಪರಿಹಾರ ಕ್ರಮ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ಬಳಿ ಹಣ ಇಲ್ಲ. ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು.
ಆದ್ದರಿಂದ ರಾಜ್ಯ ಸರ್ಕಾರ ಅದನ್ನೇ ನೆಪ ಮಾಡಿಕೊಂಡು ಇರುವುದು ಬೇಡ ಎಂದರು.ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಬರ ಪರಿಹಾರ ಕೊಡಬೇಕು ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಸರ್ಕಾರ ಕಣ್ಣಿದ್ದು ಕುರುಡಾಗಿದೆ ಕಿವಿ ಇದ್ದು ಕಿವುಡಾಗಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ನಿಮ್ಮ ತಂದೆಯವರು ಭಾಷಣದಲ್ಲಿ ಈ ಮಾತು ಹೇಳುತ್ತಿದ್ದರು.ನಿಮ್ಮ ತಂದೆಯವರ ಮಾತನ್ನು ನೀವು ಮುಂದುವರಿಸುತ್ತಿದ್ದೀರಿ.ಅವರು ಹೃದಯವು ಇಲ್ಲ ಎನ್ನುತ್ತಿದ್ದರು ಅದನ್ನು ಹೇಳಲಿಲ್ಲವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರರ ಕಾಲೆಳೆದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…