BREAKING NEWS

ಕಬ್ಬು ಬೆಳೆಗಾರರಿಗೆ 30 ಸಾವಿರ ಪರಿಹಾರ ನೀಡಿ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಕಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30 ಸಾವಿರ ಬರ ಪರಿಹಾರ ಕೊಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರಾಜ್ಯದಲ್ಲಿ ಕಬ್ಬು ದ್ರಾಕ್ಷಿ ಬೆಳೆಗಾರರು ಸಮಸ್ಯೆಯಲ್ಲಿ ಇದ್ದಾರೆ. ಕಬ್ಬು ಬೆಳೆಗಾರರಿಗೆ ಎಕರೆಗೆ ಕನಿಷ್ಠ 30,000 ಪರಿಹಾರ ಕೊಡಿ. ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಿ.ಕೇಂದ್ರ ಸರ್ಕಾರ ಕೊಡಬೇಕಾದ ಬರ ಪರಿಹಾರ ಕೊಟ್ಟೆ ಕೊಡುತ್ತದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿವೈ ವಿಜೇಂದ್ರ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ಪರಿಹಾರ ಕ್ರಮ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ಬಳಿ ಹಣ ಇಲ್ಲ. ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು.

ಆದ್ದರಿಂದ ರಾಜ್ಯ ಸರ್ಕಾರ ಅದನ್ನೇ ನೆಪ ಮಾಡಿಕೊಂಡು ಇರುವುದು ಬೇಡ ಎಂದರು.ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಕೂಡಲೇ ಬರ ಪರಿಹಾರ ಕೊಡಬೇಕು ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಆಗ್ರಹಿಸಿದರು.

ಸರ್ಕಾರ ಕಣ್ಣಿದ್ದು ಕುರುಡಾಗಿದೆ ಕಿವಿ ಇದ್ದು ಕಿವುಡಾಗಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶಿಸಿ ನಿಮ್ಮ ತಂದೆಯವರು ಭಾಷಣದಲ್ಲಿ ಈ ಮಾತು ಹೇಳುತ್ತಿದ್ದರು.ನಿಮ್ಮ ತಂದೆಯವರ ಮಾತನ್ನು ನೀವು ಮುಂದುವರಿಸುತ್ತಿದ್ದೀರಿ.ಅವರು ಹೃದಯವು ಇಲ್ಲ ಎನ್ನುತ್ತಿದ್ದರು ಅದನ್ನು ಹೇಳಲಿಲ್ಲವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರರ ಕಾಲೆಳೆದರು.

andolanait

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago