ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮ್ಮ ಮೇಲಿನ ಕೋಪಕ್ಕೆ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಬಿಜೆಪಿ ಎಂದರೆ ಬಡವರ ವಿರೋದಿ ಪಕ್ಷ. ಹೀಗಾಗಿ, ನಾವು ಬೇರೆ ಕಡೆಯಿಂದ ಅಕ್ಕಿ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಬುಧವಾರ (ಜೂನ್ 28) ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.
ಅಕ್ಕಿ ತರಲು ಪ್ರಯತ್ನ ಮಾಡಿದರು ಅಗತ್ಯ ಪ್ರಮಾಣದ ದಾಸ್ತಾನು ಸಿಕ್ಕಿಲ್ಲ. ಅಕ್ಕಿ ಸಿಕ್ಕಿದ ಕೂಡಲೆ ನಾವು ಈ ಯೋಜನೆ ಜಾರಿ ಮಾಡ್ತೇವೆ. ಯಾವುದೇ ಕಾರಣಕ್ಕೂ ಯೋಜನೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅನ್ನಭಾಗ್ಯ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ” ಯಡಿಯೂರಪ್ಪ ಮಾತನಾಡಲಿ. ಅವರ ಅವಧಿಯಲ್ಲಿ ಏನು ಜನಪರ ಯೋಜನೆ ಮಾಡಿದ್ರು ಹೇಳಲಿ. ಯಡಿಯೂರಪ್ಪ ಹೋರಾಟ ಮಾಡೋದು ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ ಎಂದು ತಿರುಗೇಟು ನೀಡಿದರು.
ನಮ್ಮ ಸರ್ಕಾರ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ. 1.28 ಕೋಟಿ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…