BREAKING NEWS

ರಾಜ್ಯದಿಂದ ಹಣ ಕೊಡ್ತಿವಿ, ಯಡಿಯೂರಪ್ಪ ಹೋರಾಟ ಬಿಟ್ಟು ಅಕ್ಕಿ ಕೊಡಿಸಲಿ: ಸಿದ್ದರಾಮಯ್ಯ

ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮ್ಮ ಮೇಲಿನ ಕೋಪಕ್ಕೆ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಬಿಜೆಪಿ ಎಂದರೆ ಬಡವರ ವಿರೋದಿ ಪಕ್ಷ. ಹೀಗಾಗಿ, ನಾವು ಬೇರೆ ಕಡೆಯಿಂದ ಅಕ್ಕಿ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಬುಧವಾರ (ಜೂನ್‌ 28) ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಅಕ್ಕಿ ತರಲು ಪ್ರಯತ್ನ ಮಾಡಿದರು ಅಗತ್ಯ ಪ್ರಮಾಣದ ದಾಸ್ತಾನು ಸಿಕ್ಕಿಲ್ಲ. ಅಕ್ಕಿ ಸಿಕ್ಕಿದ ಕೂಡಲೆ ನಾವು ಈ ಯೋಜನೆ ಜಾರಿ ಮಾಡ್ತೇವೆ. ಯಾವುದೇ ಕಾರಣಕ್ಕೂ ಯೋಜನೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಹೋರಾಟ ಬಿಟ್ಟು ಅಕ್ಕಿ ಕೊಡಿಸಲಿ

ಯಡಿಯೂರಪ್ಪ ಅನ್ನಭಾಗ್ಯ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ” ಯಡಿಯೂರಪ್ಪ ಮಾತನಾಡಲಿ. ಅವರ ಅವಧಿಯಲ್ಲಿ ಏನು ಜನಪರ ಯೋಜನೆ ಮಾಡಿದ್ರು ಹೇಳಲಿ. ಯಡಿಯೂರಪ್ಪ ಹೋರಾಟ ಮಾಡೋದು ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ ಎಂದು ತಿರುಗೇಟು ನೀಡಿದರು.

ಜುಲೈ 1 ರಿಂದ ಗೃಹಜ್ಯೋತಿ

ನಮ್ಮ ಸರ್ಕಾರ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ. 1.28 ಕೋಟಿ‌ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago