Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆ ಖುಷಿ ತಂದಿದೆ: ಜೆ.ಪಿ ನಡ್ಡಾ

ಬೆಂಗಳೂರು: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ, ʼʼಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದಾರೆ.

https://x.com/ANI/status/1705168687572156810?s=20

ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ʼʼಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲʼʼ ಎಂದು ತಿಳಿಸಿದರು.

https://x.com/JPNadda/status/1705173097207451819?s=20

2024ರ ಲೋಕಸಭೆಯ ಚುನಾವಣೆಯಲ್ಲಿ ಸ್ಪರ್ಧಿಸೊಲ್ಲ:  ಮೈತ್ರಿಯ ವಿಚಾರದ ಬಗ್ಗೆ ಚರ್ಚೆಯನ್ನು ಮಾಡಲಾಗಿದೆ. ಆದರೆ, ಲೋಕಸಭೆಯಲ್ಲಿ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಅಂತಿಮವಾಗಿ ಚರ್ಚೆಯನ್ನು ಮಾಡಿಲ್ಲ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಒಬ್ಬ ಕಾರ್ಯಕರ್ತನಾಗಿ ನಾನು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ. ಇನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ಹಲವಾರು ನಾಯಕರಿದ್ದಾರೆ. ನಾನು ಮಂಡ್ಯದಿಂದ ಸ್ಪರ್ಧೆ ಮಾಡುವ ಆಕಾಂಕ್ಷಿಯಲ್ಲ. ನಾನು ಚುನಾವಣಾ ರಾಜಕಾರಣದಿಂದ ಸದ್ಯಕ್ಕೆ ಹಿಂದೆ ಸರಿದಿದ್ದೇನೆ. ಆದರೆ, ನಾನು ರಾಜಕಾರಣದಿಂದ ಹಿಂದಕ್ಕೆ ಸರಿಯುವುದಿಲ್ಲ. ನನ್ನ ವೃತ್ತಿಜೀವನ ಸಿನಿಮಾವಾಗಿದ್ದು, ಅದರಲ್ಲಿ ಮುಂದುವರೆಯುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ