BREAKING NEWS

ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಸಿದ್ದರಾಮಯ್ಯ

ಬೆಂಗಳೂರು: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ನೀವು ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು.

ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಭುತ್ವದ ಮೇಲೆ ನಿಂತಿದೆ ಎಂದು ಅಂಬೇಡ್ಕರ್ ಹೇಳಿದ್ದರು. ಹೀಗಾಗಿ ಸಾಮಾಜಿಕ ಪ್ರಭುತ್ವದ ಮೂಲಕ ಅರ್ಥಪೂರ್ಣ ರಾಜಕೀಯ ಸ್ವಾತಂತ್ರ್ಯ ಧಕ್ಕಿಸಿಕೊಳ್ಳಲು ಅಕ್ಷರ ವಂಚಿತರಿಗೆ ಶಿಕ್ಷಣ ದೊರಕಿಸುವ ಅಗತ್ಯವಿದೆ. ನಿಮಗೆ ಉತ್ತಮ ಶಿಕ್ಷಣ ಸಿಕ್ಕಿದ್ದರಿಂದಲೇ ನೀವು ಉದ್ಯಮಪತಿಗಳಾಗಲು, ಆರ್ಥಿಕವಾಗಿ ದೇಶಕ್ಕೆ ಕೊಡುಗೆ ಕೊಡಲು ಸಾಧ್ಯವಾಗಿದೆ. ಸ್ವಾಭಿಮಾನದಿಂದ ಬದುಕಲು ಆರ್ಥಿಕ, ಸಾಮಾಜಿಕ ಅವಕಾಶಗಳು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

ಬಡವ ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಬೇಕು ಎನ್ನುವ ಉದ್ದೇಶದಿಂದಲೇ ಸಾರ್ವತ್ರಿಕ ಮೂಲ ಆದಾಯ ಎನ್ನುವ ತತ್ವದ ಅಡಿಯಲ್ಲಿ  ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತಿದೆ. ಇದೇ ಆಶಯದ ಅಡಿಯಲ್ಲಿ ಆಯವ್ಯಯವನ್ನು ರೂಪಿಸಲಾಗಿದ್ದು,  ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರಿಗೂ ಅನ್ವಯ ಆಗುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಮುಂದಾಗಿದ್ದೇವೆ. ಇದರಿಂದಾಗಿ ಆರ್ಥಿಕತೆಗೆ ಹೊಸ ಚೈತನ್ಯ ಮತ್ತು ಶಕ್ತಿ ಬಂದಿದೆ. ನಾಡಿನ ಮಹಿಳೆಯರಿಗೆ ಆರ್ಥಿಕ‌ ಸಫಲತೆ ಬಂದಿದೆ. ಹಸಿವಿನಿಂದ ಮಲಗುವವರು ಇಲ್ಲವಾಗಿದೆ. ಬಾಲ ಕಾರ್ಮಿಕ ಪದ್ಧತಿ ನಶಿಸಲು ನಮ್ಮ ಕಾರ್ಯಕ್ರಮ ಮತ್ತು ಗ್ಯಾರಂಟಿಗಳು ನೆರವಾಗುತ್ತಿವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ,ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ , ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ  ಗೋವಿಂದರಾಜ್ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.

andolanait

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

30 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago