ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.
ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ ನೀಡಿಲ್ಲ.
ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿತ್ತು. ಈ ವಿಚಾರವಾಗಿ ಕೆಆರ್ ನಗರ ಶಾಸಕರಾಗಿದ್ದ, ಮಾಜಿ ಸಚಿವ ಸಾ ರಾ ಮಹೇಶ್ ಅವರು ಕೂಡ ಜಟಾಪಟಿ ನಡೆಸಿದ್ದರು. ವಿಧಾನಸೌಧದಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ದೂರು ಬಂದ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ ತನಿಖೆಯನ್ನು ನಡೆಸಿತ್ತು.
ಬಟ್ಟೆ ಬ್ಯಾಗ್ ಖರೀದಿ ಸಂಬಂಧಿಸಿದಂತೆ 15 ರೂಪಾಯಿ ಬಿಲ್‌ಗೆ 50 ರೂಪಾಯಿ ಬಿಲ್ ಹಾಕಿರುವ ಆರೋಪ ರೋಹಿಣಿ ಸಿಂಧೂರಿ ಅವರ ವಿರುದ್ಧ ಕೇಳಿ ಬಂದಿತ್ತು. ಪರಂಪರಿಕ ಕಟ್ಟಡಕ್ಕೆ ಧಕ್ಕೆ ಉಂಟಾಗುವಂತೆ ಈಜು ಕೊಳ ನಿರ್ಮಾಣ ಮಾಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿದೆ. ಉಳಿದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಅಂದು ಮೈಸೂರಿನ ಜಿಲ್ಲಾಧಿಕಾರಿಗಳಾಗಿದ್ದ ರೋಹಿಣಿ ಅವರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪವೂ ಅವರ ಮೇಲಿದೆ.
ಅಂದಿನ ವಸತಿ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ ಜಿ ರವಿಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಪ್ರಾಥಮಿಕವಾಗಿ ಒಂದು ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು.
ಈ ತನಿಖೆಯ ಸಂದರ್ಭದಲ್ಲಿ ರೋಹಿಣಿ ಅವರು ಸಮರ್ಪಕ ಉತ್ತರ, ಸರಿಯಾಗಿ ಮಾಹಿತಿಯ ದಾಖಲೆಯಗಳು ಕೊಡದೆ ಇರುವ ಕಾರಣ ಮೇಲ್ನೋಟಕ್ಕೆ ಅಕ್ರಮ ನಡೆಸಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಮಿತಿ ವರದಿಯನ್ನು ಕೊಟ್ಟಿತ್ತು. ಈ ವರದಿಯ ಆಧಾರದ ಮೇಲೆ ಸರ್ಕಾರ ಈಗ ಇಲಾಖಾವಾರು ತನಿಖೆ ನಡೆಸಲು ಸಮಿತಿ ರಚನೆ ಮಾಡಿ ಆದೇಶ ನೀಡಿದೆ.
ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು. ಸದ್ಯ ತನಿಖೆಯಲ್ಲಿ ಸತ್ಯಾಂಶ ಹೊರ ಬರುತ್ತಾ ಅಂತ ಕಾದು ನೋಡಬೇಕಿದೆ.
ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…