BREAKING NEWS

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.

ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ‌ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ‌ ನೀಡಿಲ್ಲ.

ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿತ್ತು. ಈ ವಿಚಾರವಾಗಿ ಕೆಆರ್ ನಗರ ಶಾಸಕರಾಗಿದ್ದ, ಮಾಜಿ ಸಚಿವ ಸಾ ರಾ ಮಹೇಶ್​ ಅವರು ಕೂಡ ಜಟಾಪಟಿ ನಡೆಸಿದ್ದರು. ವಿಧಾನಸೌಧದಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ದೂರು ಬಂದ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ ತನಿಖೆಯನ್ನು ನಡೆಸಿತ್ತು.

ಬಟ್ಟೆ ಬ್ಯಾಗ್​ ಖರೀದಿ ಸಂಬಂಧಿಸಿದಂತೆ 15 ರೂಪಾಯಿ ಬಿಲ್‌ಗೆ 50 ರೂಪಾಯಿ ಬಿಲ್​ ಹಾಕಿರುವ ಆರೋಪ ರೋಹಿಣಿ ಸಿಂಧೂರಿ ಅವರ ವಿರುದ್ಧ ಕೇಳಿ ಬಂದಿತ್ತು. ಪರಂಪರಿಕ ಕಟ್ಟಡಕ್ಕೆ ಧಕ್ಕೆ ಉಂಟಾಗುವಂತೆ ಈಜು ಕೊಳ ನಿರ್ಮಾಣ ಮಾಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿದೆ. ಉಳಿದಂತೆ ಚಾಮರಾಜನಗರ ಆಕ್ಸಿಜನ್​ ದುರಂತ ಪ್ರಕರಣದಲ್ಲಿ ಅಂದು ಮೈಸೂರಿನ ಜಿಲ್ಲಾಧಿಕಾರಿಗಳಾಗಿದ್ದ ರೋಹಿಣಿ ಅವರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪವೂ ಅವರ ಮೇಲಿದೆ.

ಅಂದಿನ ವಸತಿ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ ಜಿ ರವಿಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಪ್ರಾಥಮಿಕವಾಗಿ ಒಂದು ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು.

ಈ ತನಿಖೆಯ ಸಂದರ್ಭದಲ್ಲಿ ರೋಹಿಣಿ ಅವರು ಸಮರ್ಪಕ ಉತ್ತರ, ಸರಿಯಾಗಿ ಮಾಹಿತಿಯ ದಾಖಲೆಯಗಳು ಕೊಡದೆ ಇರುವ ಕಾರಣ ಮೇಲ್ನೋಟಕ್ಕೆ ಅಕ್ರಮ ನಡೆಸಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಮಿತಿ ವರದಿಯನ್ನು ಕೊಟ್ಟಿತ್ತು. ಈ ವರದಿಯ ಆಧಾರದ ಮೇಲೆ ಸರ್ಕಾರ ಈಗ ಇಲಾಖಾವಾರು ತನಿಖೆ ನಡೆಸಲು ಸಮಿತಿ ರಚನೆ ಮಾಡಿ ಆದೇಶ ನೀಡಿದೆ.

ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು. ಸದ್ಯ ತನಿಖೆಯಲ್ಲಿ ಸತ್ಯಾಂಶ ಹೊರ ಬರುತ್ತಾ ಅಂತ ಕಾದು ನೋಡಬೇಕಿದೆ.

ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago