ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಅರ್ಥಿಕವಾಗಿ ದಿವಾಳಿಯಾಗದಂತೆ 5
ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು. ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇವೆ. ಗ್ಯಾರಂಟಿಗಳನ್ನು ಈಡೇರಿಸಲು
ಸರ್ಕಾರ ಬದ್ಧವಾಗಿದೆ. ಮುಂದಿನ ಸಚಿವ ಸಂಪುಟ ಸಭೆ ಆದ ಮೇಲೆ ಎಲ್ಲಾ ಭರವಸೆ ಕಡ್ಡಾಯವಾಗಿ ಜಾರಿ ಮಾಡುತ್ತೇವೆ ಎಂದರು.
5 ಗ್ಯಾರಂಟಿಗಳನ್ನು ಈಡೇರಿಸಲು 150 ಸಾವಿರ ಕೋಟಿ ಬೇಕಾಗುತ್ತದೆ. ಕಟ್ಟುನಿಟ್ಟಾಗಿ ತೆರಿಗೆ ವಸೂಲಿ ಮಾಡಿದರೆ ಆದಾಯ ಹೆಚ್ಚಳವಾಗುತ್ತದೆ ಎಂದು ಹೇಳಿದರು.
ರಾಜ್ಯದ ಬಜೆಟ್ 3 ಲಕ್ಷ 10 ಸಾವಿರ ಕೋಟಿ ರೂಪಾಯಿ ಆಗಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ತೆರಿಗೆ ಕೊಟ್ಟುತ್ತೇವೆ. ಆದರೆ, ಹಿಂದಿನ ರಾಜ್ಯ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಸವರಾಜ ಬೊಮ್ಮಾಯಿ ಅವರು ಜಿಎಸ್‌ಟಿ ಕೌನ್ಸಿಲ್ ಸದಸ್ಯರಾಗಿದ್ದರು. ಆದರೂ ರಾಜ್ಯಕ್ಕೆ ಬರಬೇಕಿದ್ದ ಜಿಎಸ್‌ಟಿ ಪಾಲು ಪಡೆಯುವಲ್ಲಿ ವಿಫಲರಾಗಿದ್ದರು ಎಂದರು. ಕೇಂದ್ರದಿಂದ ರಾಜ್ಯಕ್ಕೆ 5,495 ಕೋಟಿ ಬರಬೇಕಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರಾದ ಡಾ. ಜಿ. ಪರಮೇಶ್ವರ್ ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.
ಕಾಂಗ್ರೆಸ್ ‘ಪಂಚ’ ಗ್ಯಾರಂಟಿ
* ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್‌ವರೆಗೆ ವಿದ್ಯುತ್ ಉಚಿತ
* ಗೃಹ ಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ 32000
* ಅನಭಾಗ್ಯ – ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೂ 100 ಕೆ.ಜಿ. ಅಕ್ಕಿ ಉಚಿತ
* ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 33000 (2 ವರ್ಷ ಮಾತ್ರ)
* ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪಾಸ್ (ಕರ್ನಾಟಕದ ಮಹಿಳೆಯರಿಗೆ ಮಾತ್ರ)
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…