BREAKING NEWS

5 ಗ್ಯಾರಂಟಿಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ: ಸಿದ್ದರಾಮಯ್ಯ

ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಅರ್ಥಿಕವಾಗಿ ದಿವಾಳಿಯಾಗದಂತೆ 5

ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು. ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇವೆ. ಗ್ಯಾರಂಟಿಗಳನ್ನು ಈಡೇರಿಸಲು

ಸರ್ಕಾರ ಬದ್ಧವಾಗಿದೆ. ಮುಂದಿನ ಸಚಿವ ಸಂಪುಟ ಸಭೆ ಆದ ಮೇಲೆ ಎಲ್ಲಾ ಭರವಸೆ ಕಡ್ಡಾಯವಾಗಿ ಜಾರಿ ಮಾಡುತ್ತೇವೆ ಎಂದರು.

5 ಗ್ಯಾರಂಟಿಗಳನ್ನು ಈಡೇರಿಸಲು 150 ಸಾವಿರ ಕೋಟಿ ಬೇಕಾಗುತ್ತದೆ. ಕಟ್ಟುನಿಟ್ಟಾಗಿ ತೆರಿಗೆ ವಸೂಲಿ ಮಾಡಿದರೆ ಆದಾಯ ಹೆಚ್ಚಳವಾಗುತ್ತದೆ ಎಂದು ಹೇಳಿದರು.

ರಾಜ್ಯದ ಬಜೆಟ್ 3 ಲಕ್ಷ 10 ಸಾವಿರ ಕೋಟಿ ರೂಪಾಯಿ ಆಗಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ತೆರಿಗೆ ಕೊಟ್ಟುತ್ತೇವೆ. ಆದರೆ, ಹಿಂದಿನ ರಾಜ್ಯ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬಸವರಾಜ ಬೊಮ್ಮಾಯಿ ಅವರು ಜಿಎಸ್‌ಟಿ ಕೌನ್ಸಿಲ್ ಸದಸ್ಯರಾಗಿದ್ದರು. ಆದರೂ ರಾಜ್ಯಕ್ಕೆ ಬರಬೇಕಿದ್ದ ಜಿಎಸ್‌ಟಿ ಪಾಲು ಪಡೆಯುವಲ್ಲಿ ವಿಫಲರಾಗಿದ್ದರು ಎಂದರು. ಕೇಂದ್ರದಿಂದ ರಾಜ್ಯಕ್ಕೆ 5,495 ಕೋಟಿ ಬರಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರಾದ ಡಾ. ಜಿ. ಪರಮೇಶ್ವರ್ ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್‌ ಖಾನ್ ಉಪಸ್ಥಿತರಿದ್ದರು.

ಕಾಂಗ್ರೆಸ್‌ ‘ಪಂಚ’ ಗ್ಯಾರಂಟಿ

* ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್‌ವರೆಗೆ ವಿದ್ಯುತ್‌ ಉಚಿತ

* ಗೃಹ ಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ 32000

* ಅನಭಾಗ್ಯ – ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೂ 100 ಕೆ.ಜಿ. ಅಕ್ಕಿ ಉಚಿತ

* ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 33000 (2 ವರ್ಷ ಮಾತ್ರ)

* ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ (ಕರ್ನಾಟಕದ ಮಹಿಳೆಯರಿಗೆ ಮಾತ್ರ)

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

10 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

10 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

11 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

12 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

12 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

18 hours ago