Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಂಸತ್ತಿನ ಚಳಿಗಾಲ ಅಧಿವೇಶನ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ

ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್‌ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.

ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

Image

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ