BREAKING NEWS

ಗ್ರಾ.ಪಂ. ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ.

ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು, ಈ ಬೇಡಿಕೆಗಳಲ್ಲಿ ಪ್ರಮುಖವಾಗಿ ವೇತನ ಪರಿಷ್ಕರಣೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಮಾಜದ ಪ್ರಜ್ಞಾವಂತಿಕೆ ಹಾಗೂ ಗ್ರಾಮೀಣ ಯುವಜನರ ಉಜ್ವಲ ಭವಿಷ್ಯದ ಅವಕಾಶಕ್ಕೆ ಸಹಾಯಕವಾಗಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು “ಅರಿವು ಕೇಂದ್ರ” ಗಳಾಗಿ ಕಾರ್ಯ ನಿರ್ವಹಿಸಬೇಕು, ಗ್ರಂಥಪಾಲಕರ ಕೆಲಸದ ಸಮಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಗಂಟೆಗಳು ಹಾಗೂ ವಿಭಜಿತ ಸಮಯವನ್ನು ಗಮನದಲ್ಲಿರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಕನಿಷ್ಠ ಮಾಸಿಕ ಮೂಲ ವೇತನವನ್ನು ನಿಗದಿಪಡಿಸಿ ಜೊತೆಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ತೆಯನ್ನು ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬಸವಣ್ಣನವರ ‘ಅರಿವೇ ಗುರು’ ತತ್ವದ ಆಶಯದಂತೆ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಮೃದ್ಧ ಸಮಾಜ ನಿರ್ಮಿಸಲು, ಸ್ಥಿರ ಸಮಾಜದ ಅಗತ್ಯವಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ. ನಾಡಿನ ಗ್ರಂಥಾಲಯ ಹಾಗೂ ಇವುಗಳನ್ನು ಪೂರ್ಣಬಳಕೆಗೆ ಸನ್ನದ್ಧಗೊಳಿಸುವ ಗ್ರಂಥಪಾಲಕರನ್ನು ಸಬಲೀಕರಣಗೊಳಿಸಲು ಹೊರಡಿಸಲಾಗಿರುವ ಈ ಆದೇಶ ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ನಮ್ಮ ಸರಕಾರದ ಬದ್ಧತೆಯ ಪ್ರತೀಕವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಹುಣಸೂರು ಮಾದಕ ವಸ್ತು ಪ್ರಕರಣ ; ಮುಂಬೈಗೆ ತೆರಳಿದ ಪೊಲೀಸರ ತಂಡ

ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ…

3 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 3 ಶುಕ್ರವಾರ

6 mins ago

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

9 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

10 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

11 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

12 hours ago