BREAKING NEWS

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅಜ್ಜಿ ನಿಧನ

ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನ ಹೊಂದಿದ್ದಾರೆ.

ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಉಮಾ ಗೋಪಾಲರಾಜ ಅರಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕುವೆಂಪುನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.53 ರ ಸುಮಾರಿಗೆ ಕೊನೆಯುಸಿರೆಳೆದ್ದಾರೆ.

ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಗೋಪಾಲರಾಜ ಅರಸು ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ದಿವ್ಯಲಕ್ಷ್ಮಿ ಅರಸ್, ಪ್ರಶಾಂತ್ ಗೋಪಾಲ್ ರಾಜ್ ಅರಸ್ ಮತ್ತು ಪ್ರಧಾನ್ ಗೋಪಾಲ್ ರಾಜ್ ಅರಸ್, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಸಂಬಂಧಿಕರು ಮತ್ತು ಸ್ನೇಹಿತರು ದುಃಖದಲ್ಲಿ ಮುಳುಗಿದ್ದಾರೆ.

ಮದನ್ ಗೋಪಾಲ್ ರಾಜ್ ಅರಸ್​ ಅವರು ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬಳಿಯ ಕೋಟೆ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೈಸೂರಿನ ಹಿಂದಿನ ಮಹಾರಾಜ ಚಾಮರಾಜ ಒಡೆಯರ್ ಅವರು ಇವರಿಗೆ ಸೇರಿದವರು. ಅವರನ್ನು ಆಗಿನ ರಾಜ ಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ಉತ್ತರಾಧಿಕಾರಿಯಾಗಿ ದತ್ತು ಪಡೆದ್ದರು.

ಮದನ್ ಗೋಪಾಲ್ ರಾಜ್ ಅರಸ್ ಅವರ ಪೂರ್ವಜರು ಚಾಮರಾಜ ಅರಸು ಅವರ ಹಿರಿಯ ಸಹೋದರರು. ಹಳೆಯ ಸಂಪ್ರದಾದಂತೆ ಕುಟುಂಬವು ಗೋಪಾಲಸ್ವಾಮಿ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು  ಕೈಗೊಳ್ಳಲಿದೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

12 seconds ago

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

12 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

13 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

13 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

13 hours ago