ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಟ್ವಿಟರ್ ಖಾತೆಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಅದು ಇಲಾಖೆಯ ಸಿಬ್ಬಂದಿಯ ಅಚಾತುರ್ಯದಿಂದ ನಡೆದಿದೆʼʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಇದೊಂದು ಗಂಭೀರ ವಿಚಾರ. ನಮ್ಮ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಿಂದ ಯಾರು ಈ ಮಾಹಿತಿಯನ್ನು ನೀಡಿದ್ದಾರೋ, ಅವರಿಗೆ ನೋಟಿಸ್ ನೀಡುತ್ತೇನೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆʼʼ ಎಂದು ತಿಳಿಸಿದರು.
ʼʼಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆʼʼ
ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ನಿಂದ ಮಾತ್ರ ಹಣ ಸ್ಲೋ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಅದು ಸ್ಥಗಿತಗೊಳ್ಳಲ್ಲ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ಸಚಿವರು ತಿಳಿಸಿದರು.
ಟ್ವೀಟ್ ಮಾಡಿ ಡಿಲಿಟ್ ಮಾಡಿದ ಇಲಾಖೆ
ಹೊಸ ನೋಂದಣಿಯನ್ನು ಸ್ಥಗಿತಗೊಳಿಸಿರುವ ಕುರಿತ ಟ್ವೀಟ್ ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸದ್ಯ ಡಿಲಿಟ್ ಮಾಡಿತ್ತು. ಇದೀಗ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಇಲಾಖೆಯ ವಿರುದ್ಧ ಅಸಮಾಧಾನ
ಸರಕಾರದ ಮಹತ್ವದ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…