Mysore
21
overcast clouds
Light
Dark

ಗೃಹಲಕ್ಷ್ಮಿ ಯೋಜನೆ : ಬೆಟ್ಟದ ತಾಯಿಗೆ ಸೇರಿದ 59 ತಿಂಗಳ ಹಣ

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ಸಾವಿರ ಹಣವನ್ನು ನಾಡ ದೇವಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ.

ನಾಡ ಅಧಿದೇವತೆ ಚಾಂಮುಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ 1,18,000 ರೂ ಹಣವನ್ನು ಅರ್ಪಿಸಲಾಗಿದೆ.

ಈ ಸಂಬಂಧ ದಿನೇಶ್‌ ಗೂಳಿಗೌಡ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗರ ಪತ್ರ ಬರೆದು ಚಾಮುಂಡೇಶ್ವರಿ ದೇವಿಗೆ ಪ್ರತಿ ತಿಂಗಳೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಕ್ರಮ ವಹಿಸುವಂತೆ ಡಿಕೆ. ಶಿವಕುಮಾರ್‌ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದರು. ಇದೀಗ ಗೃಹಲಕ್ಷ್ಮೀ ಯೋಜನೆಯ ಪ್ರತಿ ತಿಂಗಳ ಹಣ ದೇವಿಯ ಬಳಿ ತಲುಪಲು ವ್ಯವಸ್ಥೆಯಾಗಿದೆ. 59 ತಿಂಗಳ 1,18,000 ರೂ ಹಣವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರಿನಲ್ಲಿ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಸಂದಾಯ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ವಯಕ್ತಿಕ ಹಣವನ್ನು ದೇವಾಲಯಕ್ಕೆ ಅರ್ಪಿಸಿದ್ದಾರೆ.

ಇನ್ನೂ ದೇವಾಲಯಕ್ಕೆ ಹಣ ಸಂದಾಯವಾಗಿರುವ ರಶೀದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಐದು ವರ್ಷಗಳ ಕಂತನ್ನು ನನ್ನ ಪರವಾಗಿ ದಿನೇಶ್‌ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ವೈಯಕ್ತಿಕವಾಗಿ ಸಲ್ಲಿಸಿದ್ದೇನೆ. ಈಗಾಗಲೇ ಮೊದಲ ಕಂತನ್ನು ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ.ಶಿವಕುಮಾರ್ ರವರು ಸಲ್ಲಿಸಿದ್ದರು.

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ.

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ.‌ ಎಂದು ಬರೆದುಕೊಂಡಿದ್ದಾರೆ.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ