ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ.
ಮರಿಮಲ್ಲಪ್ಪ – ಅರಸು ರಸ್ತೆ ಮಾರ್ಗದಲ್ಲಿನ ಟೀ ಕ್ಯಾಂಟೀನ್ ಒಂದರಲ್ಲಿ ಸ್ನೇಹಿತರೊಂದಿಗೆ ಟೀ ಕುಡಿಯುತ್ತಾ ಕುಳಿತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಯುವಕನ ಮೂಲತಃ ಉದಯಗಿರಿಯ ನಿವಾಸಿ ಎನ್ನಲಾಗಿದ್ದು, ಹಬೀಬ್ ಎಂದು ಗುರುತಿಸಲಾಗಿದೆ. ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗುಂಪು ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳುವಿನ ಜತೆಗಿದ್ದ ಸ್ನೇಹಿತ ಸ್ಥಳೀಯರ ಸಹಾಯದೊಂದಿಗೆ ಗಾಯಾಳುವನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…