ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.
ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್‌ಲೈನ್ ಗೇಮಿಂಗ್ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ III ರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.
IGST ಕಾಯಿದೆಯಲ್ಲಿನ ತಿದ್ದುಪಡಿಯು ಆನ್‌ಲೈನ್ ಗೇಮಿಂಗ್‌ಗೆ GST ವಿಧಿಸುವ ನಿಬಂಧನೆಗೆ ಸಂಬಂಧಿಸಿದ್ದು. ಇಂತಹ ಗೇಮಿಂಗ್ ಘಟಕಗಳು ಭಾರತದಲ್ಲಿ GST ನೋಂದಣಿ ಮಾಡಿಸುವುದು ಅಗತ್ಯವಾಗಿದೆ.
ಇನ್ನು ವಿದೇಶಿ ಆನ್‌ಲೈನ್ ಗೇಮಿಂಗ್ ಪ್ಲಾಟ್ಫಾರ್ಮ್ಗಳು ನೋಂದಣಿ ಮತ್ತು ತೆರಿಗೆ ಪಾವತಿಯ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಭಾರತದೊಳಗೆ ಈ ಗೇಮಿಂಗ್ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂಬುದನ್ನು ಈ ತಿದ್ದುಪಡಿಯಲ್ಲಿ ತಿಳಿಸಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…