ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ಕಾಂಗ್ರೆಸ್ 5 ಗ್ಯಾರಂಟಿ ಕಾರ್ಡ್‌ಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದೆ. ಅಲ್ಲದೇ ಗ್ಯಾರಂಟಿ ಕಾರ್ಡ್‌ಗಳಲ್ಲಿ ಸಿದ್ದರಾಮಯ್ಯ ಅವರ ಸಹಿ ಇದೆ. ಆದ್ದರಿಂದ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಎಂದು ಮನವಿ ಮಾಡಲಾಗಿದೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…