ಕೋವಿಡ್‌: ಒಬ್ಬರು ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 2,000 ಸಹಾಯಧನ

ಅಹಮದಾಬಾದ್: ಕೋವಿಡ್‌ನಿಂದ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವುದಾಗಿ ಗುಜರಾತ್‌ ಸರ್ಕಾರ ಘೋಷಿಸಿದೆ.

ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ (ಕೋವಿಡ್‌ನಿಂದಾಗಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿರುವ 18 ವರ್ಷದವರೆಗಿನ ಮಕ್ಕಳಿಗೆ ಪ್ರತಿ ತಿಂಗಳು 4,000 ರೂ. ಸಹಾಯಧನ) ಪೂರಕವಾಗಿ ಈ ಯೋಜನೆ ಘೋಷಿಸಲಾಗಿದೆ.

ಈ ಸಂಬಂಧ ಗುಜರಾತ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುನೈನಾ ತೋಮರ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಪತ್ರ ಹೊರಡಿಸಿದ್ದು, ಸಂತ್ರಸ್ತ ಮಕ್ಕಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಸೂಚಿಸಿದ್ದಾರೆ.

× Chat with us