BREAKING NEWS

ಗುಜರಾತ್: UCCಗೆ ಸೈದ್ಧಾಂತಿಕ ಬೆಂಬಲ ನೀಡಿದ ಎಎಪಿ ತೊರೆದ ಬುಡಕಟ್ಟು ನಾಯಕ!

ರಾಜ್ಪಿಪ್ಲಾ(ಗುಜರಾತ್): 2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರೊಬ್ಬರು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಪಕ್ಷದ ತಾತ್ವಿಕ ಬೆಂಬಲವನ್ನು ಪ್ರತಿಭಟಿಸಿ ಎಎಪಿ ತೊರೆದಿದ್ದಾರೆ.

ಎಎಪಿಯ ರಾಷ್ಟ್ರೀಯ ಸಂಯೋಜಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಪ್ರಫುಲ್ಲ ವಾಸವ ಅವರು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಮೇಲಿನ ದಾಳಿ ಎಂದು ಹೇಳಿದ್ದಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ನರ್ಮದಾ ಜಿಲ್ಲೆಯ ನಂದೋದ್ (ಎಸ್‌ಟಿ) ಕ್ಷೇತ್ರದಿಂದ ಸ್ಪರ್ಧಿಸಿದ್ದ ವಾಸವ ಅವರು ತಮ್ಮ ರಾಜೀನಾಮೆಯಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುವಾಗ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ಮಾತನಾಡುವಂತಿಲ್ಲ ಎಂದು ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ಆದಿವಾಸಿಗಳು ಅನುಭವಿಸುತ್ತಿರುವ ಎಲ್ಲಾ ಸವಲತ್ತುಗಳನ್ನು ಕೊನೆಗೊಳಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಮಣಿಪುರದಲ್ಲಿ ಕೇಂದ್ರವು ‘ಆದಿವಾಸಿಗಳನ್ನು’ ಕೊಂದಿದೆ ಎಂದು ವಾಸವ ಆರೋಪಿಸಿದರು . ಮೂಲಭೂತವಾದ ಮತ್ತು ದ್ವೇಷದ ರಾಜಕೀಯವನ್ನು ವಿರೋಧಿಸಲು ಎಎಪಿಗೆ ಕೇಳಿಕೊಂಡರು. ಎಎಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿರುವ ವಾಸವ, ‘ಏಕರೂಪ ನಾಗರಿಕ ಸಂಹಿತೆಯು ಬುಡಕಟ್ಟು, ಪರಿಶಿಷ್ಟ ಜಾತಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಇತರ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳು, ಜೀವನಶೈಲಿ ಮತ್ತು ಸಾಮಾಜಿಕ ರಚನೆಯ ಮೇಲೆ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದಾರೆ.

ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಅಗತ್ಯವನ್ನು ಪ್ರಸ್ತಾಪಿಸಿದ ನಂತರ, ಎಎಪಿ ತನ್ನ ತಾತ್ವಿಕ ಬೆಂಬಲವನ್ನು ನೀಡಿತು. ಪಕ್ಷದ ನಾಯಕ ಸಂದೀಪ್ ಪಾಠಕ್ ಅದನ್ನು ಎಲ್ಲರ ಒಪ್ಪಿಗೆಯೊಂದಿಗೆ ತರಬೇಕು ಎಂದು ಹೇಳಿದರು. ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಪಾಠಕ್ ಇತ್ತೀಚೆಗೆ, “ಎಎಪಿ ತಾತ್ವಿಕವಾಗಿ ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತದೆ” ಎಂದು ಹೇಳಿದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

44 mins ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

1 hour ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

2 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

2 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

2 hours ago