ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದಾರೆ.
ಈ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಹಂಗಳ ಗ್ರಾಮ ಪಂಚಾಯತಿಯಿಂದ 173 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು.
‘ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ’ ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…