ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದತ್ತ ಬರುವ ಶಂಕೆ ದಟ್ಟವಾಗಿದೆ. ಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗದಲ್ಲಿ ಭದ್ರತೆಗಾಗಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಬಿರುನಾಣಿ, ಕುಟ್ಟ, ಪರಕಟಕೇರಿ ಮತ್ತು ತೆರಲು ಭಾಗಗಳಲ್ಲಿ ನಕ್ಸಲರಿಗಾಗಿ ಕೂಂಬಿಂಗ್ ಶುರುವಾಗಿದೆ.
ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ಅವರನ್ನು ಕೂಡಲೇ ವಿಚಾರಣೆಗೊಳಪಡಿಸುವಂತೆ ಕೊಡಗು ಜಿಲ್ಲೆಯ ಎಸ್ ಪಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ. ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇರಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಲಾಗುತ್ತಿದೆ.
ಇನ್ನು ಗಡಿ ಭಾಗಕ್ಕೆ ಎಸ್ ಪಿ ರಾಮರಾಜನ್,ವಿರಾಜಪೇಟೆಯ ಡಿ ವೈ ಎಸ್ ಪಿ ಮೋಹನ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…
ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…