ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ಗೊತ್ತಾಗಿದೆ: ಎಚ್‌ಡಿಕೆ

ಕಲಬುರ್ಗಿ: ಜೆಡಿಎಸ್‌ ಶಕ್ತಿ ಏನು ಎನ್ನುವುದನ್ನು ನಮ್ಮ ಕಾರ್ಯಕರ್ತರು ಮೈಸೂರು ಮೇಯರ್‌ ಸ್ಥಾನ ಗೆದ್ದು ತೋರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ. ಜೆಡಿಎಸ್‌ ಒಂದು ಪಕ್ಷನಾ ಎಂದು ಹೀಯಾಳಿಸಿದ್ದರು. ಆದರೆ, ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎನ್ನುವುದನ್ನು ನಮ್ಮ ಕಾರ್ಯಕರ್ತರು ತೋರಿಸಿದ್ದಾರೆ ಎಂದು ಟಾಂಗ್‌ ನೀಡಿದರು.

ಪಾಲಿಕೆ ಚುನಾವಣೆಯಲ್ಲಿ ಸ್ಥಳೀಯವಾಗಿ ನಡೆದ ಹೊಂದಾಣಿಕೆ. ಶಾಸಕ ತನ್ವೀರ್‌ ಸೇಠ್‌ ಬಂದು ವಿನಂತಿ ಮಾಡಿಕೊಂಡಿದ್ದರು ಎಂದು ವಿವರಿಸಿದರು.

× Chat with us