Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪ್ರಧಾನಿ ಮಾತು ಕೇಳಿದ್ದರೆ 5 ವರ್ಷವೂ ನಾನೇ ಸಿಎಂ ಆಗಿರುತ್ತಿದ್ದೆ: ಎಚ್ಡಿಕೆ ಅಚ್ಚರಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಸಿಎಂ‌ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಬಂದಾಗ ಮಧ್ಯಪ್ರವೇಶ ಮಾಡಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿವೆ ಎಂದರು.

ಕಪ್ಪು ಚುಕ್ಕೆ ಬರಬಾರದು ಎಂದು ಒಪ್ಪಿಕೊಳ್ಲಿಲ್ಲ

ಈ‌ ವೇಳೆ ಕುಮಾರಸ್ವಾಮಿ ಅವರೇ ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ? ಎಂದು ಸಿದ್ದರಾಮಯ್ಯ ತಿರುಗೇಟು ‌ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ,ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ. ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ‌. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ‌ ಎಂದರು.

ಪ್ರಧಾನಿ ಮಾತು ಕೇಳಿ ತೀರ್ಮಾನ ಮಾಡಿದ್ದರೆ ನಾನು ಕಳೆದ ಐದು ವರ್ಷಗಳ ಕಾಲ ಸಿಎಂ ಆಗ್ತಿದ್ದೆ. ಪದೇ ಪದೇ ಬಿಜೆಪಿ ಬಿ ಟೀಂ ಎಂದು ಹೇಳುತ್ತಾ ನೀವೇ ಬಿಜೆಪಿ ಕಡೆ ತಳ್ಳುತ್ತೀರಿ. ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ನಾನು ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ