ಹೈಟಿ ಭೂಕಂಪ: ಮೃತರ ಸಂಖ್ಯೆ 2,189ಕ್ಕೇರಿಕೆ

ಹೈಟಿ: ಭೀಕರ ಭೂಕಂಪನದಿಂದ ಹೈಟಿಯಲ್ಲಿ ಮೃತಪಟ್ಟವರ ಸಂಖ್ಯೆ 2,189ಕ್ಕೆ ಏರಿಕೆಯಾಗಿದೆ.

ಕಳೆದ ಶನಿವಾರ 7.2 ತೀವ್ರತೆಯ ಭೂಕಂಪನದಿಂದ ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ. ಅತಿಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದ ಪ್ರಧಾನಿ ಏರಿಯಲ್ ಹೆನ್ರಿ, ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡುಕು ಉಂಟಾಗಿದೆ ಎಂದು ತಿಳಿದುಬಂದಿದೆ.

× Chat with us