ನವದೆಹಲಿ : ಪಂಜಾಬ್ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್ ಮೇಲೆ ನಡೆದ ಹಮಾಸ್ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ಸಂಘಟನೆ ಬೆದರಿಕೆ ಹಾಕಿದೆ.
ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್‌ಎಫ್‌ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.
ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್ ಪನ್ನು ಬೆದರಿಸಿದ್ದಾನೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆ ಲಿಬರೇಷನ್ ಆಫ್ ಪಂಜಾಬ್ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…