ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಉದ್ಘಾಟಿಸಿದರು.
ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಅವರ ಸಮ್ಮುಖದಲ್ಲಿ 10.15 ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ವಿಶೇಷ ಪೂಜೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಸಾಂಪ್ರದಾಯಿಕ ದಸರಾ ಆಚರಣೆಯಲ್ಲಿ ನಂದಿಧ್ವಜ ಕುಣಿತದ, ನಾದಸ್ವರದ ಮೂಲಕ ಉದ್ಘಾಟಕರು ಮತ್ತು ಗಣ್ಯರನ್ನು ಸ್ವಾಗತಿಸಲಾಯಿತು. ಬೆಳ್ಳಿ ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಮಳೆ ಬೆಳೆಯಾಗಿ ಸಮೃದ್ಧಿಗೊಳ್ಳಲಿ ಎಂದು ಹರಸಿದರು.
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು.ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ.ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಡಿಡಿಪಿಐ ಪಾಂಡುರಂಗ,ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…