ಉಪಚುನಾವಣೆ : ಹಾನಗಲ್ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ವಿಜಯ

ಹಾನಗಲ್ : ತೀವ್ರ ಕುತೂಹಲ ಕೆರಳಿಸಿದ್ದ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ವಿಜಯಿಯಾಗಿದ್ಧಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನವರ್ ಪರಾಭವಗೊಂಡಿದ್ದು, ಜೆಡಿಎಸ್‌ನ ನಿಯಾಜ್ ಶೇಖ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದ.

ತಮ್ಮ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ಶ್ರೀನಿವಾಸ್ ಮಾನೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಗೆಲುವು ಸಾಧಿಸಿದ್ದೇವೆ. ಹಾನಗಲ್‌ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ತಂತ್ರ ಫಲಿಸಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ೮೭,೧೧೩ ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಶಿವರಾಜ್ ಸಜ್ಜನವರ್ ೭೯,೫೧೩ ಮತಗಳು ಮತ್ತು ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ೯೨೧ ಮತಗಳು ಬಿದ್ದಿವೆ.

× Chat with us