ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.
ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್‌ಸಿಎ ತೇಜಸ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್‌ಸಿಎ ತೇಜಸ್ ಯುದ್ಧ ವಿಮಾನವನು ಎಚ್‌ಎಎಲ್, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.
ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್ ಭಟ್ ಹಾಗೂ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹಾಗೂ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಮುಖ್ಯಸ್ಥರು ಹಾಜರಿದ್ದರು.
2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 8 ಎಲ್‌ಸಿಎ ತೇಜಸ್ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್‌ಎಎಲ್ ಪೂರೈಸಲಿದೆ.
ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್‌ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಹೇಳಿದೆ.
ಬಲಿಷ್ಠ ಎಂಜಿನ್, ಅತ್ಯಾಧುನಿಕ ಗ್ಲಾಸ್ ಕಾಕ್‌ಪಿಟ್, ಇಂಟಿಗ್ರೇಟೆಡ್ ಡಿಜಿಟಲ್ ಏವಿಯಾನಿಕ್ಸ್ ಸಿಸ್ಟಮ್ಸ್ ಮತ್ತು ಅಡ್ವಾನ್ಸ್ಡ್ ಫ್ಲೈಟ್ ಕಂಟ್ರೋಲ್ ಸಿಸ್ಟಮ್ಸ್ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್‌ಸಿಎ ತೇಜಸ್ ಯುದ್ಧ ವಿಮಾನಗಳು ಹೊಂದಿವೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…