ಮುಂಬಾಯಿ : ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.
ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ.
ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಶನಿವಾರ ಟ್ವೀಟ್ ಮಾಡಿ, ʼಅನ್ನಪೂರ್ಣಿʼ ಸಿನಿಮಾವನ್ನು ಹಿಂದೂ ವಿರೋಧಿ,ಸಿನಿಮಾ ಲವ್ ಜಿಹಾದ್ ನ್ನು ಉತ್ತೇಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ’ ಎಂದು ಸೋಲಂಕಿ ಬರೆದಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…