Mysore
26
scattered clouds
Light
Dark

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್‌ ವಶಕ್ಕೆ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಲೈಂಗಿಕ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿತ್ತು. ನೋಟಿಸ್‌ ತಲುಪಿದ ಬಳಿಕ ದೇವರಾಜೇಗೌಡ ತಲೆಮರೆಸಿಕೊಂಡಿದ್ದ ಎನ್ನಲಾಗಿತ್ತು.

ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಅವರನ್ನು ಖಚಿತ ಮಾಹಿತಿ ಮೇರೆಗೆ ಹಿರಿಯೂರು ತಾಲೂಕಿನ ಕೆ.ಆರ್‌ ಹಳ್ಳಿ ಗೇಟ್‌ ಬಳಿ ಪೊಲೀಸರು ವಶಕ್ಕೆ ಪಡೆದರು. ಬಳಿಕ ಗ್ರಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಯಿತು. ಹೊಳೆನರಸೀಪುರದ ಪೊಲೀಸರು ದೇವರಾಜೇಗೌಡ ಅವರನ್ನು ಹಾಸನಕ್ಕೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದೆ.