ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರು ರಾತ್ರಿ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿಲಾಗಿತ್ತು. ನೋಟಿಸ್ ತಲುಪಿದ ಬಳಿಕ ದೇವರಾಜೇಗೌಡ ತಲೆಮರೆಸಿಕೊಂಡಿದ್ದ ಎನ್ನಲಾಗಿತ್ತು.
ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಅವರನ್ನು ಖಚಿತ ಮಾಹಿತಿ ಮೇರೆಗೆ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದರು. ಬಳಿಕ ಗ್ರಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಯಿತು. ಹೊಳೆನರಸೀಪುರದ ಪೊಲೀಸರು ದೇವರಾಜೇಗೌಡ ಅವರನ್ನು ಹಾಸನಕ್ಕೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…